ಕೀರ್ತನೆಗಳು 100 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಲೋಕವೆಲ್ಲಾ ಇಸ್ರಾಯೇಲರ ದೇವರನ್ನು ಆರಾಧಿಸಬೇಕೆಂಬ ಬೋಧನೆ ಕೀರ್ತ 95 ಕೃತಜ್ಞತಾಯಜ್ಞ ಕೀರ್ತನೆ. 1 ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. 2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. 3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. 4 ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. 5 ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.