ಕೀರ್ತನೆಗಳು 11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಯೆಹೋವನ ಶರಣರಿಗೆ ದುರ್ಗತಿಯಿಲ್ಲ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. 1 ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ? 2 ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ. 3 ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು? 4 ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ. 5 ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ. 6 ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ. 7 ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.