ಕೀರ್ತನೆಗಳು 120 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಮೋಸಗಾರರ ಮಧ್ಯದಲ್ಲಿ ವಾಸಿಸುವವನ ಪ್ರಾರ್ಥನೆ ಯಾತ್ರಾಗೀತೆ. 1 ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು. 2 ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು. 3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? 4 ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು. 5 ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ! 6 ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು. 7 ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.