ಕೀರ್ತನೆಗಳು 121 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಯೆಹೋವನ ಭಕ್ತಪಾಲನೆ ಆದಿ 28:15 ಯಾತ್ರಾಗೀತೆ. 1 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು? 2 ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ. 3 ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ. 4 ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ. 5 ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ. 6 ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ. 7 ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು. 8 ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.