ಕೀರ್ತನೆಗಳು 126 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಚೀಯೋನಿನ ಸೌಭಾಗ್ಯದ ಪುನಃಸ್ಥಾಪನೆಗಾಗಿ ಪ್ರಾರ್ಥನೆ ಕೀರ್ತ 85 ಯಾತ್ರಾಗೀತೆ. 1 ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು. 2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ. 4 ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. 5 ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, 6 ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.