ಕೀರ್ತನೆಗಳು 127 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಯೆಹೋವನ ಕೃಪೆಯಿಂದಲೇ ಕೃತಾರ್ಥರಾಗುವೆವು ನೆಹೆ 7:3-4 ಯಾತ್ರಾಗೀತೆ; ಸೊಲೊಮೋನನದು. 1 ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ. 2 ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. 3 ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ. 4 ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; 5 ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.