ಕೀರ್ತನೆಗಳು 128 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಭಕ್ತನ ಭಾಗ್ಯ ಕೀರ್ತ 127 ; 144:12-15 ಯಾತ್ರಾಗೀತೆ. 1 ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. 2 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು. 3 ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು. 4 ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು. 5 ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು. 6 ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.