ಕೀರ್ತನೆಗಳು 129 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಯೆಹೋವನು ತನ್ನ ಭಕ್ತರನ್ನು ಶತ್ರುಗಳಿಂದ ಬಿಡಿಸುವನೆಂಬ ನಿರೀಕ್ಷೆ ಕೀರ್ತ 124 ಯಾತ್ರಾಗೀತೆ. 1 “ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ. 2 “ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ. 3 ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.” 4 ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು. 5 ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ. 6 ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ; 7 ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. 8 ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.