ಕೀರ್ತನೆಗಳು 13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಶತ್ರುಪೀಡಿತನ ಪ್ರಾರ್ಥನೆ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ. 1 ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ? 2 ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು? 3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು. 4 ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು. 5 ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು. 6 ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.