ಕೀರ್ತನೆಗಳು 131 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಭಕ್ತರ ದೀನಭಾವ ಜ್ಞಾನೋ 23:26 ; ಮತ್ತಾ 18:3 ಯಾತ್ರಾಗೀತೆ; ದಾವೀದನದು. 1 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ. 2 ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ. 3 ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.