ಕೀರ್ತನೆಗಳು 137 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಸೆರೆಯವರ ಪ್ರಲಾಪ 2ಪೂರ್ವ 36 1 ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು. 2 ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು. 3 ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು. 4 ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ? 5 ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ. 6 ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ. 7 ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ. 8 ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು. 9 ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.