ಕೀರ್ತನೆಗಳು 14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ದುಷ್ಟ ನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂಬ ಪ್ರಾರ್ಥನೆ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. 1 ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. 2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, 3 ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ. 4 ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ. 5 ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ. 6 ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ. 7 ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.