ಕೀರ್ತನೆಗಳು 142 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಇಕ್ಕಟ್ಟಿನಲ್ಲಿದ್ದವನ ಪ್ರಾರ್ಥನೆ ಕೀರ್ತ 140 ; 1ಸಮು 22 ; 24 ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. 1 ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು. 2 ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು. 3 ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ. 4 ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ. 5 ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ. 6 ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ. 7 ಸೆರೆಯಿಂದ ನನ್ನನ್ನು ಬಿಡಿಸು, ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.