ಕೀರ್ತನೆಗಳು 15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಯೆಹೋವನ ಸನ್ನಿಧಿಗೆ ಬರಲು ಯೋಗ್ಯರಾದವರು ದಾವೀದನ ಕೀರ್ತನೆ. 1 ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು? 2 ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. 3 ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು. 4 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. 5 ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.