ಕೀರ್ತನೆಗಳು 150 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಸಮಾಪ್ತಿಯ ಕೀರ್ತನೆ 1 ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ. 2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ. 3 ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. 4 ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. 5 ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. 6 ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ! |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.