ಕೀರ್ತನೆಗಳು 23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಭಕ್ತರೆಂಬ ಕುರಿಗಳಿಗೆ ಒಳ್ಳೆಯ ಕುರುಬನಾದ ಯೆಹೋವನು ದಾವೀದನ ಕೀರ್ತನೆ. 1 ಯೆಹೋವನು ನನಗೆ ಕುರುಬನು; ಕೊರತೆಪಡೆನು. 2 ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3 ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5 ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.