ಕೀರ್ತನೆಗಳು 3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಶತ್ರುಬಾಧಿತನಾದ ದೈವಭಕ್ತನ ಉದಯಗೀತೆ ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ. 1 ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ. 2 ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ 3 ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. 4 ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ. 5 ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು. 6 ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು. 7 ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು. 8 ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.