ಕೀರ್ತನೆಗಳು 54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ವೈರಿಗಳಿಂದ ರಕ್ಷಿಸಬೇಕೆಂದು ಪ್ರಾರ್ಥಿಸುವುದು ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. 1 ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು. 2 ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು. 3 ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ 4 ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು. 5 ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು. 6 ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು. 7 ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.