ಕೀರ್ತನೆಗಳು 6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಕಷ್ಟಪೀಡಿತನಾದ ಭಕ್ತನ ಪ್ರಾರ್ಥನೆ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ. 1 ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. 2 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ. 3 ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ? 4 ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು. 5 ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? 6 ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ. 7 ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು. 8 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. 9 ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು. 10 ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.