ಕೀರ್ತನೆಗಳು 67 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ದೇವಸ್ತುತಿ ಕೀರ್ತ 98 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. 1 ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ 2 ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. 3 ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ 5 ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 6 ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ; 7 ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.