ಕೀರ್ತನೆಗಳು 82 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು ಕೀರ್ತ 58 ಆಸಾಫನ ಕೀರ್ತನೆ. 1 ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ. 2 “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ. 3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ. 4 ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.” 5 ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ. 6 “ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು, 7 ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು. 8 ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ? |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.