Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಯೆಹೋಶುವ 20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019


ಆಶ್ರಯ ನಗರಗಳನ್ನು ನೇಮಿಸಿದ್ದು

1 ಯೆಹೋವನು ಯೆಹೋಶುವನನ್ನು ಕುರಿತು,

2 “ನೀನು ಇಸ್ರಾಯೇಲರಿಗೆ ‘ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯ ನಗರಗಳನ್ನು ಗೊತ್ತು ಮಾಡಿಕೊಳ್ಳಿರಿ;

3 ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ.

4 ಅಂಥ ಪಟ್ಟಣಕ್ಕೆ ಓಡಿ ಹೋದವನು ಮೊದಲು ಊರ ಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಕ್ಕೆ ಸೇರಿಸಿಕೊಂಡು, ಅವನ ವಾಸಕ್ಕೆ ಸ್ಥಳ ಕೊಡಲಿ

5 ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು.

6 ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿ ಇರಬೇಕು. ಆ ನಂತರ ತಾನು ಬಿಟ್ಟು ಬಂದ ಪಟ್ಟಣದಲ್ಲಿರುವ ಮನೆಗೆ ಹಿಂತಿರುಗಿ ಹೋಗಬಹುದು’ ಎಂದು ಹೇಳು” ಎಂದನು.

7 ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.

8 ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು.

9 ಇಸ್ರಾಯೇಲ್ಯರೆಲ್ಲರಿಗೂ ಹಾಗೂ ಅವರ ಮಧ್ಯದಲ್ಲಿ ವಾಸಮಾಡುತ್ತಿದ್ದ ಪರದೇಶಿಗಳಿಗೂ ಇವು ಆಶ್ರಯ ನಗರಗಳಾಗಿ ನೇಮಕ ಆಗಿದ್ದವು. ಬೇರೊಬ್ಬನನ್ನು ಆಕಸ್ಮಾತ್ತಾಗಿ ಕೊಂದವನು ಓಡಿಹೋಗಿ ಹತನಾದವನ ಹತ್ತಿರದ ಬಂಧುವಿನಿಂದ ತಲೆ ತಪ್ಪಿಸಿ ಕೊಳ್ಳಬಹುದು. ಅಲ್ಲದೆ ತಾನು ನ್ಯಾಯ ಸಭೆಯ ಮುಂದೆ ನಿಲ್ಲುವವರೆಗೆ ಅಲ್ಲೇ ಇರಬಹುದಾಗಿದೆ.

KAN-IRV

Creative Commons License

Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.

Bridge Connectivity Solutions Pvt. Ltd.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು