Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಯೆಹೋಶುವ 21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019


ಲೇವಿ ಕುಲದವರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳು

1 ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,

2 “ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?” ಅನ್ನಲು

3 ಅವರು ಯೆಹೋವನ ಆಜ್ಞೆಯಂತೆ ತಮ್ಮ ಸ್ವತ್ತಿನಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಅವರಿಗೆ ಕೊಟ್ಟರು.

4 ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು.

5 ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು.

6 ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.

7 ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು

8 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.

9 ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಚೀಟು ಬಿದ್ದಿತು.

10 ಆದ್ದರಿಂದ ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು.

11 ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.

12 ಆದರೆ ಇದರ ಹೊಲಗಳನ್ನೂ, ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.

13 ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,

14 ಯತ್ತೀರ್, ಎಷ್ಟೆಮೋಹ,

15 ಹೋಲೋನ್, ದೆಬೀರ್,

16 ಅಯಿನ್, ಯುಟ್ಟಾ, ಬೇತ್‌ಷೆಮೆಷ್‌ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು

17 ಹಾಗೂ ಬೆನ್ಯಾಮೀನನ ಕುಲದಿಂದ ಗಿಬ್ಯೋನ್, ಗೆಬ,

18 ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು.

19 ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.

20 ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ

21 ಎಫ್ರಾಯೀಮ್ಯರ ಸ್ವತ್ತಿನಿಂದ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ,

22 ಗೆಜೆರ್, ಕಿಬ್ಚೈಮ್ ಹಾಗೂ ಬೇತ್‌ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,

23 ದಾನ್ಯರ ಸ್ವತ್ತಿನಿಂದ ಎಲ್ತೆಕೇ, ಗಿಬ್ಬೆತೋನ್,

24 ಅಯ್ಯಾಲೋನ್, ಗತ್‌ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,

25 ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್‌ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು.

26 ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು.

27 ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;

28 ಇಸ್ಸಾಕಾರ್ ಸ್ವತ್ತಿನಿಂದ ಕಿಷ್ಯೋನ್, ದಾಬೆರತ್,

29 ಯರ್ಮೂತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;

30 ಆಶೇರ್ ಕುಲದಿಂದ ಮಿಷಾಲ್, ಅಬ್ದೋನ್,

31 ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;

32 ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.

33 ಗೇರ್ಷೊನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.

34 ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸ್ವತ್ತಿನಿಂದ ಯೊಕ್ನೆಯಾಮ್,

35 ಕರ್ತಾ, ದಿಮ್ನಾ ಹಾಗೂ ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು.

36 ರೂಬೇನ್ಯರ ಸ್ವತ್ತಿನಿಂದ ಬೆಚೆರ್, ಯಹಚಾ,

37 ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು;

38 ಗಾದ್ಯರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,

39 ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು ದೊರಕಿದವು.

40 ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿಯಿಂದ ದೊರಕಿದ ಪಟ್ಟಣಗಳು ಒಟ್ಟು ಹನ್ನೆರಡು.

41 ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು.

42 ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು.

43 ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.

44 ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.

45 ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.

KAN-IRV

Creative Commons License

Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.

Bridge Connectivity Solutions Pvt. Ltd.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು