ಯೋಬ 25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ಬಿಲ್ದದನು ಯೋಬನಿಗೆ ನೀಡಿದ ಮೂರನೆಯ ಪ್ರತ್ಯುತ್ತರ 1 ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು, 2 “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ. 3 ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ? 4 ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ? 5 ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ. 6 ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!” |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.