Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಅರಣ್ಯಕಾಂಡ 2 - ಕನ್ನಡ ಸತ್ಯವೇದವು C.L. Bible (BSI)


ದಂಡು ಹೊರಡುವ ಹಾಗೂ ಬೀಡುಬಿಡುವ ಕ್ರಮ

1 ಸರ್ವೇಶ್ವರ ಸ್ವಾಮಿ ಮೋಶೆ - ಆರೋನರಿಗೆ ಕೊಟ್ಟ ಆಜ್ಞೆ ಇದು:

2 ಇಸ್ರಯೇಲರೆಲ್ಲರೂ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನೂ ತನ್ನ ತನ್ನ ಗೋತ್ರ ಧ್ವಜದ ಹತ್ತಿರ ತನ್ನ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.

3 “ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಅಮ್ಮಿನಾದಾಬನ ಮಗ ನಹಶೋನ.

4 ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 74,600:

5 ಅವರ ಸಮೀಪದಲ್ಲೇ ಇಸ್ಸಾಕಾರ್ ಕುಲದವರೂ ಜೆಬುಲೂನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಚೂವಾರನ ಮಗ ನೆತನೇಲ್;

6 ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 54,400:

7 ಜೆಬುಲೂನ್ಯರಿಗೆ ನಾಯಕ ಹೇಲೋನನ ಮಗ ಎಲೀಯಾಬ್,

8 ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 57,400:

9 ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,86,400: ಇವರು ಮುಂಭಾಗದಲ್ಲಿ ಹೊರಡಬೇಕು.

10 “ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಈ ರೂಬೇನ್ ಕುಲದವರಿಗೆ ನಾಯಕ ಶೆದೇಯೂರನ ಮಗ ಎಲೀಚೂರ;

11 ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 46,500:

12 ಅವರ ಸಮೀಪದಲ್ಲೇ ಸಿಮೆಯೋನ್ ಕುಲದವರೂ ಗಾದ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಸಿಮೆಯೋನ್ ಕುಲದವರಿಗೆ ನಾಯಕ ಚೂರೀಷದ್ದೈಯನ ಮಗ ಶೆಲೂಮೀಯೇಲ;

13 ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 59,300:

14 ಗಾದ್ ಕುಲದವರಿಗೆ ನಾಯಕ ರೆಗೂವೇಲನ ಮಗ ಎಲ್ಯಾಸಾಫ;

15 ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 45,650:

16 ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ್ದವರೆಲ್ಲರ ಸಂಖ್ಯೆ - 1,51,450: ಇವರು ಎರಡನೆಯ ದಂಡಾಗಿ ಹೊರಡಬೇಕು.

17 “ಅನಂತರ ಸೈನ್ಯಗಳ ನಟ್ಟನಡುವೆ ದೇವದರ್ಶನದ ಗುಡಾರ ಮತ್ತು ಲೇವಿಯರ ಪಾಳೆಯದವರು ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.

18 ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಹೂದನ ಮಗ ಎಲೀಷಾಮಾ;

19 ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 40,500:

20 ಅವರ ಸಮೀಪದಲ್ಲೇ ಮನಸ್ಸೆ ಕುಲದವರು ಬೆನ್ಯಾಮೀನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಮನಸ್ಸೆ ಕುಲದವರಿಗೆ ನಾಯಕ ಪೆದಾಚೂರನ ಮಗ ಗಮ್ಲೀಯೆಲ್;

21 ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ -32,200:

22 ಬೆನ್ಯಾಮೀನ್ ಕುಲದವರಿಗೆ ನಾಯಕ ಗಿದ್ಯೋನಿಯ ಮಗ ಅಬೀದಾನ್.

23 ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ -35,400:

24 ಹೀಗೆ ಎಫ್ರಾಯೀಮರ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,08,100: ಇವರು ಮೂರನೆಯ ದಂಡಾಗಿ ಹೊರಡಬೇಕು.

25 ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಷದ್ದೈಯನ ಮಗ ಅಹೀಗೆಜೆರ್;

26 ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 62,700:

27 ಅವರ ಸಮೀಪದಲ್ಲೇ ಆಶೇರ್ ಕುಲದವರು ಮತ್ತು ನಫ್ತಾಲಿ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆಶೇರ್ ಕುಲದವರಿಗೆ ನಾಯಕ ಒಕ್ರಾನನ ಮಗ ಪಗೀಯೇಲ್;

28 ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 41,500:

29 ನಫ್ತಾಲಿ ಕುಲದವರಿಗೆ ನಾಯಕ ಏನಾನನ ಮಗ ಅಹೀರ;

30 ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 53,400:

31 ಹೀಗೆ ದಾನ್ ಕುಲದ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,57,600: ಇವರು ಕಡೆಯ ದಂಡಾಗಿ ಹೊರಡಬೇಕು.

32 ಇವರೇ ಇಸ್ರಯೇಲರಲ್ಲಿ ಗೋತ್ರಗೋತ್ರಗಳ ಪ್ರಕಾರ ಎಣಿಕೆಯಾದವರು. ಆ ದಂಡುಗಳಲ್ಲಿ ಸೈನಿಕರಾಗಿ ಎಣಿಕೆಯಾದ ಸೈನಿಕರ ಸಂಖ್ಯೆ - 6,03,500:

33 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇತರ ಇಸ್ರಯೇಲರ ಸಂಗಡ ಎಣಿಕೆಯಾಗಲಿಲ್ಲ.

34 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಹಾಗೆಯೆ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಂತೆಯೇ ಗೋತ್ರ ಕುಟುಂಬಗಳ‍ ಪ್ರಕಾರ ಹೊರಡುತ್ತಿದ್ದರು.

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು