ಕೀರ್ತನೆಗಳು 100 - ಕನ್ನಡ ಸತ್ಯವೇದವು C.L. Bible (BSI)ಉಪಕಾರ ಸ್ಮರಣೆ 1 ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ I 2 ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ I ಹಾಡುತ, ಪಾಡುತ, ಬನ್ನಿ ಆತನ ಸನ್ನಿಧಿಗೆ II 3 ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II 4 ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ I ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ I ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ II 5 ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India