Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 111 - ಕನ್ನಡ ಸತ್ಯವೇದವು C.L. Bible (BSI)


ದೈವಭಯ ಸುಜ್ಞಾನಕ್ಕೆ ಮೂಲ

1 ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II

2 ಮಹತ್ತಾದವು ಪ್ರಭುವಿನಾ ಕಾರ್ಯಗಳು I ಕೊಂಡಾಡುವರು ಅವುಗಳನು ಭಕ್ತಾದಿಗಳು II

3 ಘನತೆ ಗೌರವವುಳ್ಳವು ಆತನ ಎಲ್ಲ ಕಾರ್ಯ I ನಿಲ್ಲುವುದು ಆತನ ನ್ಯಾಯನೀತಿಯು ನಿತ್ಯ II

4 ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II

5 ಆಹಾರವನೀಯುವನು ಭಯಭಕ್ತಿಯುಳ್ಳವರಿಗೆ I ತನ್ನೊಡಂಬಡಿಕೆಯ ಚಿರ ನೆನಪಿರುವುದು ಆತನಿಗೆ II

6 ತನ್ನ ಪ್ರಜೆಗಿತ್ತಿಹನು ಅನ್ಯಜನರ ಸೊತ್ತನು I ತೋರ್ಪಡಿಸಿಹನು ಈ ಪರಿ ತನ್ನ ಸಾಮರ್ಥ್ಯವನು II

7 ನೀತಿ ಸತ್ಯತೆಯುಳ್ಳವು ಆತನ ಸತ್ಕಾರ್ಯಗಳು I ಸುಸ್ಥಿರವಾದವು ಆತನ ನಿಯಮ ನಿಬಂಧನೆಗಳು II

8 ಯುಗಯುಗಾಂತರಕು ದೃಢವಾಗಿರುವುವು I ಸತ್ಯನೀತಿಗಳು ಅವುಗಳಿಗೆ ಅಡಿಪಾಯವು II

9 ವಿಮೋಚನೆಯನಿತ್ತಿಹನು ಪ್ರಭು ತನ್ನ ಪ್ರಜೆಗೆ I ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ I ಪರಿಶುದ್ಧ, ಪರಮಪೂಜ್ಯ ಆತನ ನಾಮಾಂಕೆ II

10 ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು