ಕೀರ್ತನೆಗಳು 113 - ಕನ್ನಡ ಸತ್ಯವೇದವು C.L. Bible (BSI)ದೇವರ ನಾಮಸ್ತುತಿ 1 ಅಲ್ಲೆಲೂಯ I ಪ್ರಭುವಿನ ದಾಸರೇ, ಸ್ತುತಿಮಾಡಿ I ಪ್ರಭುವಿನ ನಾಮಸ್ತುತಿಯನು ಮಾಡಿ II 2 ಪ್ರಭುವಿನ ಸಿರಿನಾಮವು ಪೂಜ್ಯ I ಇಂದಿಗೂ ಎಂದೆಂದಿಗೂ ಪೂಜ್ಯ II 3 ಪ್ರಭುವಿನಾ ಸಿರಿನಾಮವು ಸ್ತುತ್ಯ I ಪೂರ್ವ ಪಶ್ಚಿಮದವರೆಗೂ ಸ್ತುತ್ಯ II 4 ಸಕಲ ಜಾತಿಜನಾಂಗಗಳಲಿ ಪ್ರಭು ಶ್ರೇಷ್ಠ I ಆತನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ II 5-6 ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I ಉನ್ನತದಲಿ ಆಸನಾರೂಢನು ಆತ I ಇಹಪರಗಳನು ವೀಕ್ಷಿಸಲಾತ ಶಕ್ತ II 7 ದೀನರನು ಎಬ್ಬಿಸುವನು ಧೂಳಿನಿಂದ I ಬಡವರನು ಎತ್ತುವನು ತಿಪ್ಪೆಯಿಂದ II 8 ಕೂರಿಸುವನಾತ ಅವರನು ಅಧಿಪತಿಗಳ ನಡುವೆ I ತನ್ನ ಪ್ರಜೆಯನಾಳುವಾ ಅಧಿಪತಿಗಳ ನಡುವೆ II 9 ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India