ಕೀರ್ತನೆಗಳು 121 - ಕನ್ನಡ ಸತ್ಯವೇದವು C.L. Bible (BSI)ಕಾಯೆಲೊ ದೇವನೆ (ಯಾತ್ರಾಗೀತೆ) 1 ಕಣ್ಣೆತ್ತಿ ನಾ ನೋಡುವೆ ಪರ್ವತದತ್ತ I ಕೇಳುವೆ : “ನನಗೆ ಒತ್ತಾಸೆ ಎತ್ತಣಿಂದ?” II 2 ನನಗೆ ಒತ್ತಾಸೆ ಪ್ರಭುವಿನಿಂದ I ಭೂಮ್ಯಾಕಾಶ ಸೃಜಿಸಿದವನಿಂದ II 3 ನಿನ್ನ ಕಾಲೆಡವದಂತೆ ನೋಡುವನಾತ I ತೂಕಡಿಸಲಾರನು ನಿನ್ನ ಕಾಯುವಾತ II 4 ಇಗೋ, ಇಸ್ರಯೇಲನು ಕಾಯುವಾತನು I ನಿದ್ರಿಸಲಾರನು, ತೂಕಡಿಸಲಾರನು II 5 ನಿನ್ನನು ಕಾಯುತಿಹನು ಪ್ರಭುವೇ I ಬಲಗಡೆ ನೆರಳಂತಿಹನು ವಿಭುವೇ II 6 ನಿನ್ನ ಬಾಧಿಸನು ಸೂರ್ಯನು ಹಗಲೊಳು I ನಿನ್ನ ಪೀಡಿಸನು ಚಂದ್ರನು ಇರುಳೊಳು II 7 ಪ್ರಭು ಕಾಯುವನು ನಿನ್ನ ಪ್ರಾಣವನು I ಸಕಲ ಕೇಡಿನಿಂದ ಕಾಪಾಡುವನು II 8 ಪ್ರಭು ಕಾಯುವನು ನಿನ್ನ ಆಗುಹೋಗುಗಳನು I ಇಂದಿಗೂ ಎಂದೆಂದಿಗೂ ನಿನ್ನ ಕಾಯುವನು II |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India