ಕೀರ್ತನೆಗಳು 127 - ಕನ್ನಡ ಸತ್ಯವೇದವು C.L. Bible (BSI)ದೇವರಿಲ್ಲದ ಕಾರ್ಯ ವ್ಯರ್ಥ (ಯಾತ್ರಾಗೀತೆ) 1 ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II 2 ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II 3 ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II 4 ಯೌವನದಲಿ ಹುಟ್ಟಿದ ಮಕ್ಕಳು I ಯೋಧರ ಕೈಲಿರುವ ಬಾಣಗಳು II 5 ಭಾಗ್ಯವಂತನು ಅಂಥ ಬಾಣಗಳಿಂದ ಬತ್ತಳಿಕೆ ತುಂಬಿದವನು I ಸೋತುಹೋಗದೆ ನ್ಯಾಯಲಾಯದೊಳೂ ವೈರಿಯೊಡನೆ ವಾದಿಸುವನು II |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India