Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 128 - ಕನ್ನಡ ಸತ್ಯವೇದವು C.L. Bible (BSI)


ಭಕ್ತನ ಭಾಗ್ಯ
(ಯಾತ್ರಾಗೀತೆ)

1 ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II

2 ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II

3 ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ I ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II

4 ಹೊಂದುವನು ಅಂತಹ ಆಶೀರ್ವಾದವನು I ಪ್ರಭುವಿನಲಿ ಭಯಭಕ್ತಿಯುಳ್ಳವನು II

5 ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II

6 ಮಕ್ಕಳ ಮಕ್ಕಳನು ನೀನು ಕಾಣುವಂತಾಗಲಿ I ಇಸ್ರಯೇಲಿನ ಮಕ್ಕಳಿಗೆ ಸುಖಶಾಂತಿ ಲಭಿಸಲಿ II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು