Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 130 - ಕನ್ನಡ ಸತ್ಯವೇದವು C.L. Bible (BSI)


ಪಾಪಪರಿಹಾರಕ್ಕಾಗಿ ಪ್ರಾರ್ಥನೆ
(ಯಾತ್ರಾಗೀತೆ)

1 ಅಂತರಾಳದಿಂದ ಪ್ರಭು, ಮೊರೆಯಿಡುತ್ತಿರುವೆ ನಿನಗೆ I

2 ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II

3 ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II

4 ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II

5 ಪ್ರಭುವಿಗಾಗಿ ಎನ್ನ ಮನ ಕಾದಿದೆ I ಆತನ ವಾಕ್ಯದಲಿ ನಂಬಿಕೆ ನನಗಿದೆ II

6 ಸೂರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ I ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ I ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ II

7 ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II

8 ಇಸ್ರಯೇಲನು ಉದ್ಧರಿಸುವನಾತ I ಅದು ಗೈದ ಸಕಲ ದೋಷಗಳಿಂದ II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು