ಕೀರ್ತನೆಗಳು 131 - ಕನ್ನಡ ಸತ್ಯವೇದವು C.L. Bible (BSI)ಭಕ್ತನ ನಮ್ರಭಾವ (ಯಾತ್ರಾಗೀತೆ) 1 ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II 2 ಎಂದೇ ನನ್ನಾತ್ಮ ಸಮಾಧಾನದಿಂದಿದೆ I ಮೌನದಿಂದಿದೆ ತಾಯ್ಮಡಿಲಾ ಕೂಸಂತೆ I ನೆಮ್ಮದಿಯಿಂದಿದೆ ತಾಯ್ಮಡಿಲಾ ಶಿಶುವಂತೆ II 3 ಇಸ್ರಯೇಲೆ, ಪ್ರಭುವಿನಲಿ ನಂಬಿಕೆಯಿಂದಿರು I ಇಂದಿಗೂ ಎಂದೆಂದಿಗೂ ಭರವಸೆಯಿಂದಿರು II |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India