Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 137 - ಕನ್ನಡ ಸತ್ಯವೇದವು C.L. Bible (BSI)


ಬಾಬಿಲೋನ್ ಬಂಧಿಗಳ ಪ್ರಲಾಪ

1 ಬಾಬಿಲೋನಿನ ನದಿಗಳ ತೀರದಲಿ ಕುಳಿತು I ಅತ್ತು ಪ್ರಲಾಪಿಸಿದೆವು ಸಿಯೋನನ್ನು ನೆನೆದು II

2 ಆ ನಾಡಿನಲಿ ಕಿನ್ನರಿಗಳನ್ನೆ ತೂಗುಹಾಕಿದೆವು I ನೀರವಂಜಿ ಮರಗಳಿಗೆ ಅವನ್ನು ನೇತುಹಾಕಿದೆವು II

3 ಸೆರೆಹಿಡಿದು ಬಂಧಿಸಿದಾ ಜನ ಈ ಪರಿ ಪೀಡಿಸಿದರೆಮ್ಮನು: I “ಹಾಡಿ, ನಮ್ಮ ವಿನೋದಕ್ಕಾಗಿ ಸಿಯೋನಿನ ಗೀತೆಗಳಲೊಂದನು” II

4 ಪ್ರಭುಗೀತೆಗಳ ನಾವು ಗಾನ ಮಾಡುವುದೆಂತು I ಅನ್ಯನಾಡಿನೊಳು ಅವುಗಳನು ಹಾಡುವುದೆಂತು II

5 ಜೆರುಸಲೇಮ್, ನಾನು ನಿನ್ನ ಮರೆತಲ್ಲಿ I ನನ್ನ ಬಲಹಸ್ತ ಬತ್ತಿಹೋಗಿಬಿಡಲಿ II

6 ಜೆರುಸಲೇಮನು ನಾ ಸ್ಮರಣೆಮಾಡದಿದ್ದಲ್ಲಿ I ಆ ಸ್ಮರಣೆ ಸರ್ವೋತ್ತಮ ನಲಿವು ನನಗಾಗದಿದ್ದಲ್ಲಿ I ಸೇದಿಹೋಗಲಿ ನಾಲಿಗೆ ನನ್ನ ಬಾಯಲಿ II

7 ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II

8-9 ಬಾಬಿಲೋನ್ ನಗರವೇ ಕೇಳು : ಅಳಿವು ಕಾದಿದೆ ನಿನಗೆ I ಭಲೆ, ನೀನೆಮಗೆ ಮಾಡಿದ್ದಕ್ಕೆ ಮುಯ್ ತೀರಿಸುವವಗೆ I ನಿನ್ನ ಮಕ್ಕಳನೆತ್ತಿ ಬಂಡೆಗಪ್ಪಳಿಸುವವನಿಗೆ II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು