Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 138 - ಕನ್ನಡ ಸತ್ಯವೇದವು C.L. Bible (BSI)


ದೈವನಾಮದ ಮಹಿಮೆ

1 ಹೃದಯಪೂರ್ವಕ ವಂದನೆ ಪ್ರಭು ನಿನಗೆ I ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II

2 ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II

3 ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II

4 ನಿನ್ನ ಗುಣಗಾನ ಮಾಳ್ಪರು ಪ್ರಭು, ಭೂರಾಜರೆಲ್ಲರು I ಏಕೆನೆ, ನೀ ಉಸುರಿದ ನುಡಿಗಳನು ಕೇಳ್ವರವರೆಲ್ಲರು II

5 ಪ್ರಭುವಿನ ಮಹಿಮೆಯು ಮಹೋನ್ನತ ಎನ್ನುವರು I ಆತನ ಮಾರ್ಗಗಳನು ಹಾಡಿ ಹರಸುವರು II

6 ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II

7 ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II

8 ಸಿದ್ಧಿಗೆ ತರುವೆ ನೀ ಪ್ರಭು, ನನ್ನ ಕಾರ್ಯವನು I ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು