Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 14 - ಕನ್ನಡ ಸತ್ಯವೇದವು C.L. Bible (BSI)


ನಾಸ್ತಿಕರ ದುಸ್ಥಿತಿ
( ಕೀರ್ತ. 53 )

1 “ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II

2 ಮಾನವರನು ಪ್ರಭು ಸ್ವರ್ಗದಿಂದ ಸಮೀಕ್ಷಿಸುತಿಹನು I ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II

3 ದಾರಿತಪ್ಪಿಹೋದ ದ್ರೋಹಿಗಳು ಅವರೆಲ್ಲ I ಒಳಿತನ್ನು ಮಾಡುವವನಿಲ್ಲ; ಓರ್ವನೂ ಇಲ್ಲ II

4 ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I

5 ಸಜ್ಜನರ ಸಂಗದೊಳು ದೇವನಿರಲು I ದುರ್ಜನರಿದೋ ದಿಗ್ಭ್ರಾಂತರಾಗುವರು II

6 ಕೆಡಿಸಬಹುದವರು ಬಡಜನರ ಯೋಜನೆಯನು I ಪ್ರಭುವಾದರೊ ಅವರಿಗೆ ಆಶ್ರಯವಾಗಿರುವನು II

7 ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು