Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 149 - ಕನ್ನಡ ಸತ್ಯವೇದವು C.L. Bible (BSI)


ಜಯಗೀತೆ

1 ಅಲ್ಲೆಲೂಯ! ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು I ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು II

2 ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II

3 ಆತನ ನಾಮವನು ಕೀರ್ತಿಸಲಿ ಕುಣಿತದಿಂದ I ಆತನನು ಭಜಿಸಲಿ ತಮಟೆ, ಕಿನ್ನರಿಗಳಿಂದ II

4 ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II

5 ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ I ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ II

6 ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ I ಇರಲಿ ಇಬ್ಬಾಯಿ ಕತ್ತಿಯು ಅವರ ಕೈಯಲಿ II

7 ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II

8 ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II

9 ವಿಧಿಸಲಿ ಅವರಿಗೆ ಲಿಖಿತಾಜ್ಞೆಯ ಶಿಕ್ಷೆಯನು I ಇದು ತರಲಿ ಭಕ್ತರೆಲ್ಲರಿಗೆ ಗೌರವವನು I ಅಲ್ಲೆಲೂಯ! II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು