Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 15 - ಕನ್ನಡ ಸತ್ಯವೇದವು C.L. Bible (BSI)


ಶ್ರೀಸಾನಿಧ್ಯಕ್ಕೆ ಅರ್ಹನಾರು?

1 ಯೋಗ್ಯನಾರು ಪ್ರಭು ನಿನ್ನ ಗುಡಾರದಲಿ ಬಿಡಾರಮಾಡಲು? I ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು? II

2 ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II

3 ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II

4 ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II

5 ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು