Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 150 - ಕನ್ನಡ ಸತ್ಯವೇದವು C.L. Bible (BSI)


ಸ್ತುತಿಗೀತೆ

1 ಅಲ್ಲೆಲೂಯ! I ಸ್ತುತಿಸಿರಿ ದೇವರನು ಆತನ ಪರಿಶುದ್ಧ ಆಲಯದಲಿ I ಆತನ ಶಕ್ತಿಯನು ಸಾರುವಾ ಆಕಾಶಮಂಡಲದಲಿ II

2 ಸ್ತುತಿಸಿರಿ ಆತನ ಮಹತ್ಕಾರ್ಯಗಳಿಗಾಗಿ I ಆತನ ಮಹಾಪ್ರಭಾವಕ್ಕೆ ಅನುಗುಣವಾಗಿ II

3 ಆತನನ್ನು ಸ್ತುತಿಸಿರಿ ಕೊಂಬುಗಳನ್ನೂದುತಾ I ಸ್ವರಮಂಡಲಗಳನು, ಕಿನ್ನರಿಗಳನು ಬಾರಿಸುತಾ II

4 ಆತನನ್ನು ಸ್ತುತಿಸಿರಿ ತಮಟೆ ಬಡಿಯುತಾ ಕುಣಿಯುತಾ I ಆತನನ್ನು ಸ್ತುತಿಸಿರಿ ತಂತಿವಾದ್ಯ ನುಡಿಸುತಾ ಕೊಳಲೂದುತಾ II

5 ಆತನನ್ನು ಸ್ತುತಿಸಿರಿ ತಾಳದಿಂದ I ಆತನನ್ನು ಸ್ತುತಿಸಿರಿ ಝಲ್ಲರಿಯಿಂದ II

6 ಪ್ರಭುವನು ಸ್ತುತಿಸಲಿ ಉಸಿರಿರುವುದೆಲ್ಲವೂ I ಪ್ರಭುವಿಗೆ ಸ್ತೋತ್ರವಾಗಲಿ ಅಲ್ಲೆಲೂಯ! II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು