ಕೀರ್ತನೆಗಳು 23 - ಕನ್ನಡ ಸತ್ಯವೇದವು C.L. Bible (BSI)ದೇವನೆನ್ನನು ಕಾಯುವ ಕುರಿಗಾಹಿ 1 ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II 2 ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II 3 ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II 4 ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II 5 ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II 6 ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India