ಕೀರ್ತನೆಗಳು 43 - ಕನ್ನಡ ಸತ್ಯವೇದವು C.L. Bible (BSI)“ನನ್ನ ನ್ಯಾಯ ನಿರ್ಣಯಿಸು ದೇವಾ” (42ನೇ ಕೀರ್ತನೆ ಮುಂದುವರಿದುದು) 1 ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II 2 ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ? I ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ? II 3 ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II 4 ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II 5 ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India