Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 53 - ಕನ್ನಡ ಸತ್ಯವೇದವು C.L. Bible (BSI)


ನಾಸ್ತಿಕರ ದುಸ್ಥಿತಿ
( ಕೀರ್ತ. 14 )

1 ಮನದಲಿ “ದೇವನಿಲ್ಲ” ಎನ್ನುವವರು ದುರ್ಮತಿಗಳು I ಹೇಯಕೃತ್ಯವೆಸಗುವವರು ಆ ಭ್ರಷ್ಟಾಚಾರಿಗಳು I ಒಳಿತನ್ನು ಮಾಡುವವರಾರೂ ಇಲ್ಲ ಅವರೊಳು II

2 ಮಾನವರನು ದೇವ ಸ್ವರ್ಗದಿಂದ ಸಮೀಕ್ಷಿಸುತಿಹನು I ತನ್ನನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II

3 ಒಳಿತನೆಸಗುವವರು ಒಬ್ಬರೂ ಇಲ್ಲ I ದ್ರೋಹಿಗಳು, ದುಷ್ಕರ್ಮಿಗಳು ಅವರೆಲ್ಲ II

4 ದುರ್ಜನರು ನನ್ನ ಜನರನು ಕೂಳಿನಂತೆ ನುಂಗುವುದೇಕೆ? I ದೇವರನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? II

5 ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II

6 ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ದೇವರು ತನ್ನ ಪ್ರಜೆಗೆ ಮರಳಿ ಸಿರಿಸಂಪದ I ನೀಡಲಿ ಯಕೋಬ ಮೇಣ್ ಇಸ್ರಯೇಲ ಜನತೆಗೆ ಹರ್ಷಾನಂದ II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು