Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 54 - ಕನ್ನಡ ಸತ್ಯವೇದವು C.L. Bible (BSI)


ದೇವರ ನಾಮಸ್ಮರಣೆ

1 ರಕ್ಷಿಸೆನ್ನನು ದೇವ, ನಿನ್ನ ನಾಮ ಶಕ್ತಿಯಿಂದ I ನ್ಯಾಯ ದೊರಕಿಸೆನಗೆ ನಿನ್ನ ಪರಾಕ್ರಮದಿಂದ II

2 ನನ್ನ ಪ್ರಾರ್ಥನೆಯನು ಆಲಿಸಯ್ಯಾ I ನನ್ನ ಮಾತುಗಳಿಗೆ ಕಿವಿಗೊಡು ದೇವಾ II

3 ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II

4 ನನಗಿದೋ ದೇವನೆ ಸಹಾಯಕನು I ಆತನೆನಗೆ ಜೀವಪೋಷಕನು II

5 ತಿರುಗುಬಾಣವಾಗಲಿ ಶತ್ರುಗಳೆನಗೆ ಬಯಸುವ ಕೇಡು I ಸತ್ಯಸ್ವರೂಪಿಯಾದ ನೀನು ಅವರನು ನಾಶಮಾಡು II

6 ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I ಕಂಡಿವೆ ನನ್ನ ಕಣ್ಗಳೇ ಶತ್ರುಗೊದಗಿದ ಸೋಲನು II

7 ಎಂತಲೆ ಸ್ವಂತ ಇಚ್ಛೆಯಿಂದ ಬಲಿಯನರ್ಪಿಸುವೆ ನಿನಗೆ I ಧನ್ಯವಾದ ಪ್ರಭು, ನಿನ್ನ ಸರ್ವೋತ್ತಮ ನಾಮಕೆ II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು