Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 67 - ಕನ್ನಡ ಸತ್ಯವೇದವು C.L. Bible (BSI)


ಸಂಕೀರ್ತಿಸಲಿ ಜನರೆಲ್ಲರು

1 ಹರಸು ದೇವಾ, ನಮ್ಮನಾಶೀರ್ವದಿಸು I ನಿನ್ನ ಮುಖಕಾಂತಿಯಿಂದೆಮ್ಮನು ಬೆಳಗಿಸು II

2 ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ I ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ II

3 ನಿನ್ನ ಕೀರ್ತಿಸಲಿ ದೇವಾ, ಜನರು I ಸಂಕೀರ್ತಿಸಲಿ ಅವರೆಲ್ಲರೂ II

4 ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ I ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ I ಹರ್ಷಾನಂದವಾಗಲಿ ಜನಾಂಗಗಳಿಗೆ II

5 ನಿನ್ನ ಕೀರ್ತಿಸಲಿ ದೇವಾ, ಜನರು I ಸಂಕೀರ್ತಿಸಲಿ ಅವರೆಲ್ಲರೂ II

6 ಇತ್ತನೆಮ್ಮ ದೇವನು ಆಶೀರ್ವಾದವನು I ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು II

7 ನಮ್ಮೆಲ್ಲರನು ದೇವನು ಹರಸಲಿ I ಎಲ್ಲೆಡೆ ಆತನ ಭಯಭಕ್ತಿಯಿರಲಿ II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು