ಕೀರ್ತನೆಗಳು 95 - ಕನ್ನಡ ಸತ್ಯವೇದವು C.L. Bible (BSI)ದೇವಾರಾಧನೆಗೆ ಕರೆ 1 ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II 2 ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ I ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ II 3 ಏಕೆಂದರೆ ಪ್ರಭು ದೇವಾಧಿದೇವನು I ದೇವರುಗಳಲೆಲ್ಲ ರಾಜಾಧಿರಾಜನು II 4 ಆತನ ಕೈಯಲ್ಲಿವೆ ಬುವಿಯಂತರಾಳಗಳು I ಆತನವೇ ಪರ್ವತಗಳಾ ತುತ್ತತುದಿಗಳು II 5 ಸಮುದ್ರವು ಆತನದೆ-ಅದ ನಿರ್ಮಿಸಿದವ ಆತನೆ I ಒಣನೆಲವು ಆತನದೆ-ಅದ ರೂಪಿಸಿದವ ಆತನೆ II 6 ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II 7 ಆತನೆಮ್ಮ ದೇವರು, ನಾವು ಆತನ ಕೈಮಂದೆ I ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II 8 ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II 9 ನೋಡಿದರಾದರೂ ನನ್ನ ಮಹತ್ಕಾರ್ಯಗಳನು I ಅಲ್ಲವರು ಕೆಣಕಿದರು, ಪರಿಶೋಧಿಸಿದರು ನನ್ನನು II 10 ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II 11 ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India