Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಯೆರೆಮೀಯ 45 - ಕನ್ನಡ ಸತ್ಯವೇದವು C.L. Bible (BSI)


ಬಾರೂಕನನ್ನು ಕುರಿತ ಭವಿಷತ್ ವಾಣಿ

1 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದನು. ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಜ್ಞೆಯ ಪ್ರಕಾರ ಈ ವಾಕ್ಯವನ್ನು ಬಾರೂಕನಿಗೆ ನುಡಿದನು.

2 “ಬಾರೂಕನೇ, ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿ ನಿನಗೆ ಹೇಳುವುದನ್ನು ಕೇಳು: ನೀನು, ‘ಅಯ್ಯೋ, ನನಗೆ ಕೇಡು!

3 ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?

4 “ಸರ್ವೇಶ್ವರನ ಈ ವಾಣಿಯನ್ನು ಕೇಳು: ‘ನೋಡು, ನಾನು ಕಟ್ಟಿದ್ದನ್ನು ನಾನೇ ಕೆಡವುತ್ತೇನೆ. ನಾನು ನೆಟ್ಟಿದ್ದನ್ನು ನಾನೇ ಕಿತ್ತುಹಾಕುತ್ತೇನೆ. ಹೌದು ಜಗದಲ್ಲೆಲ್ಲ ಹಾಗೆ ಮಾಡುತ್ತೇನೆ.

5 ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು