ಯೆಹೆಜ್ಕೇಲನು 15 - ಕನ್ನಡ ಸತ್ಯವೇದವು C.L. Bible (BSI)ಕೆಲಸಕ್ಕೆಬಾರದ ದ್ರಾಕ್ಷಿಯ ಕಟ್ಟಿಗೆ 1 ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು: 2 “ನರಪುತ್ರನೇ, ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷದ ವಿಶಿಷ್ಟತೆಯೇನು? ಕಾಡುಗಿಡಗಳ ಕಟ್ಟಿಗೆಗಿಂತ ದ್ರಾಕ್ಷಿಯ ಕಟ್ಟಿಗೆಯಲಿ ಹೆಚ್ಚಾದುದೇನು? 3 ದ್ರಾಕ್ಷಿಯ ಕಟ್ಟಿಗೆಯನ್ನು ಬಳಸಿ ಮಾಡುತ್ತಾರೆಯೆ ಏನನ್ನಾದರು? ಸಾಮಗ್ರಿಗಳನ್ನು ತಗಲಿಹಾಕಲು ಅದರಿಂದ ಮಾಡುತ್ತಾರೆಯೇ ಗೂಟವನ್ನಾದರು? 4 ಇಲ್ಲ, ಬೆಂಕಿಗೆ ಹಾಕುತ್ತಾರೆ. ಸೌದೆಯಾಗಿ, ಅದನ್ನು ಬೆಂಕಿ ಸುಟ್ಟುಬಿಡುತ್ತದೆ. ಅದರ ಎರಡು ಕೊನೆಗಳೂ ಇದ್ದಲಾಗುತ್ತವೆ. ಅದರ ಮಧ್ಯಭಾಗವು ಬಾರದು ಯಾವ ತರದ ಬಳಕೆಗು. 5 ಇದ್ದ ಹಾಗೆಯೆ ಇದ್ದಾಗ ಅದು ಬಾರಲಿಲ್ಲ ಯಾವ ಕೆಲಸಕ್ಕು. ಬೆಂಕಿಯಲ್ಲಿ ಸುಟ್ಟು ಇದ್ದಲಾದಾಗ ಯಾವುದಕ್ಕೆ ಬಂದೀತು?” 6 ಇಂತಿರಲು ಸರ್ವೇಶ್ವರನಾದ ದೇವರು ಹೇಳುವುದಿದು: “ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷವನ್ನೆ ಅಗ್ನಿಗೆ ನಾನು ಸೌದೆಯನ್ನಾಗಿಸಿರುವಂತೆ ಕೊಟ್ಟಿರುವೆನು ಜೆರುಸಲೇಮನ್ನು ವಿನಾಶಕ್ಕೆ. 7 ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು. 8 ಅವರು ದ್ರೋಹ ಮಾಡಿದ್ದರಿಂದ ನಾಡು ಕಾಡಾಗುವುದು ನನ್ನಿಂದ.” ಇದು ಸರ್ವೇಶ್ವರನಾದ ದೇವರ ನುಡಿ. |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India