Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಯೆಹೋಶುವ 16 - ಕನ್ನಡ ಸತ್ಯವೇದವು C.L. Bible (BSI)


ಎಫ್ರಯಿಮ್, ಮನಸ್ಸೆ ಕುಲಗಳ ಸೊತ್ತು

1 ಜೋಸೆಫನ ವಂಶದವರಿಗೆ ದೊರಕಿದ ಆಸ್ತಿಪಾಸ್ತಿಯ ಎಲ್ಲೆಯು ಜೆರಿಕೋವಿನ ಬಳಿಯಲ್ಲಿ ಜೋರ್ಡನ್ ತೀರದಿಂದ ತೊಡಗಿ ಜೆರಿಕೋವಿನ ಪೂರ್ವದಲ್ಲಿದ್ದ ನದಿ, ಜೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಮಲೆನಾಡಿನ ಮರುಭೂಮಿ ಹಾಗೂ ಬೇತೇಲ್ ಇವುಗಳ ಮೇಲೆ ಲೂಜಿಗೆ ಹೋಗುತ್ತದೆ.

2 ಅಲ್ಲಿಂದ ಅರ್ಕೀಯರ ಎಲ್ಲೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ.

3 ಅಲ್ಲಿಂದ ಇಳಿದು ದಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನಿನ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.

4 ಇದು ಜೋಸೆಫನ ಮಕ್ಕಳಾದ ಮನಸ್ಸೆ-ಎಫ್ರಯಿಮ್ ಎಂಬ ಕುಲಗಳಿಗೆ ದೊರೆತ ಸೊತ್ತಿನ ಎಲ್ಲೆ.


ಎಫ್ರಯಿಮ್ ಕುಲದ ಆಸ್ತಿ

5 ಎಫ್ರಯಿಮ್ ಗೋತ್ರಗಳ ನಾಡಿನ ದಕ್ಷಿಣ ದಿಕ್ಕಿನ ಎಲ್ಲೆ ಆಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ತೊಡಗಿ ಮೇಲಿನ ಬೇತ್ ಹೋರೋನಿನ ಮೇಲೆ ಸಮುದ್ರ ತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ. ಅದರ ಉತ್ತರ ದಿಕ್ಕಿನ ಎಲ್ಲೆ ಮಿಕ್ಮೆತಾತ್ ಎಂಬಲ್ಲಿ ತೊಡಗಿ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.

6-7 ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಜೆರಿಕೋ ಪ್ರಾಂತ್ಯಕ್ಕೆ ಸೋಂಕಿ ಜೋರ್ಡನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.

8 ಅದರ ಎಲ್ಲೆ ತಪ್ಪೊಹದಿಂದ ಪಶ್ಚಿಮ ಕಡೆಗೆ ಹೋಗುವ ಕಾನಾ ನದಿಯನ್ನು ಅನುಸರಿಸಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಯಿಮ್ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತು ಇದೇ.

9 ಇದಲ್ಲದೆ, ಎಫ್ರಯಿಮ್ ಕುಲದವರಿಗೆ ಮನಸ್ಸೆ ಕುಲದವರ ಮಧ್ಯೆ ಪ್ರತ್ಯೇಕವಾದ ಕೆಲವು ನಗರಗಳೂ ಅವಕ್ಕೆ ಸೇರಿದ ಗ್ರಾಮಗಳೂ ದೊರಕಿದವು.

10 ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು