Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಹೋಶೇಯ 3 - ಕನ್ನಡ ಸತ್ಯವೇದವು C.L. Bible (BSI)


ಪತಿದ್ರೋಹಿಯೊಡನೆ ಹೊಶೇಯ

1 ಅನಂತರ ಸರ್ವೇಶ್ವರ ನನಗೆ ಹೇಳಿದ್ದೇನೆಂದರೆ: “ನನ್ನ ಜನರಾದ ಇಸ್ರಯೇಲಿನವರು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ಅವುಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ಬಯಸುತ್ತಾರೆ. ಆದರೂ ಸರ್ವೇಶ್ವರ ಅವರನ್ನು ಪ್ರೀತಿಸುತ್ತಾರೆ. ಇದಕ್ಕೆ ನಿದರ್ಶನವಾಗಿ, ನೀನು ಹೋಗಿ, ಜಾರನಿಗೆ ಪ್ರಿಯಳೂ ಮತ್ತು ವ್ಯಭಿಚಾರಿಣಿಯೂ ಆದ ಸ್ತ್ರೀಯೊರ್ವಳನ್ನು ಪ್ರೀತಿಸು.”

2 ಅಂತೆಯೇ ನಾನು ಹದಿನೈದು ಬೆಳ್ಳಿ ನಾಣ್ಯಗಳು ಮತ್ತು 150 ಕಿಲೋಗ್ರಾಂ. ಜವೆಗೋದಿಯನ್ನು ಕೊಟ್ಟು, ಅಂಥವಳನ್ನು ನನಗಾಗಿ ಕೊಂಡುಕೊಂಡೆನು.

3 ಆಮೇಲೆ ಅವಳಿಗೆ: “ದೀರ್ಘಕಾಲ ನನ್ನವಳಾಗಿ ಜೀವಿಸು. ಇನ್ನು ಮುಂದೆ ವ್ಯಭಿಚಾರಮಾಡಬೇಡ. ಇತರರ ಸಹವಾಸ ನಿನಗೆ ಬೇಡ. ನಾನು ಸಹ ಅದರಂತೆಯೇ ನಿನ್ನವನಾಗಿ ಜೀವಿಸುವೆನು,” ಎಂದೆನು.

4 ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.

5 ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು