1 ಪೂರ್ವಕಾಲ ವೃತ್ತಾಂತ 24 - ಕನ್ನಡ ಸತ್ಯವೇದವು J.V. (BSI)ಯಾಜಕವರ್ಗಗಳೂ ಉಳಿದ ಲೇವಿಯರ ಪಟ್ಟಿಯೂ 1 ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್ ಈತಾಮಾರ್ ಎಂಬವರು. 2 ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದದರಿಂದ ಎಲ್ಲಾಜಾರ್ ಈತಾಮಾರರು ಯಾಜಕೋದ್ಯೋಗವನ್ನು ನಡಿಸುತ್ತಿದ್ದರು. 3 ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರತಿಯ ಮೇಲೆ ಸೇವಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು. 4 ಎಲ್ಲಾಜಾರನ ಸಂತಾನದ ಕುಟುಂಬಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದದರಿಂದ ಎಲ್ಲಾಜಾರ್ಯರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ ಈ ವರ್ಗಗಳ ವಿಷಯವಾಗಿ ಚೀಟುಹಾಕಿದರು. 5 ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯಾಧಿಪತಿಗಳೂ ದೈವಿಕಕಾರ್ಯಗಳ ಅಧ್ಯಕ್ಷರೂ ಇರುವದರಿಂದ ಉಭಯ ಸಂತಾನಗಳವರು ಸಮಾನಸ್ಥಾನದವರು. 6 ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇವಿುಸಿ ಎಲ್ಲಾ ವರ್ಗಗಳ ಸರತಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು. 7 ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು; 8 ಎರಡನೆಯದು ಯೆದಾಯನಿಗೆ; ಮೂರನೆಯದು ಹಾರೀಮನಿಗೆ; 9 ನಾಲ್ಕನೆಯದು ಸೆಯೋರೀಮನಿಗೆ; ಐದನೆಯದು ಮಲ್ಕೀಯನಿಗೆ; ಆರನೆಯದು ವಿುಯ್ಯಾಮೀನನಿಗೆ; 10 ಏಳನೆಯದು ಹಕ್ಕೋಚನಿಗೆ; 11 ಎಂಟನೆಯದು ಅಬೀಯನಿಗೆ; ಒಂಭತ್ತನೆಯದು ಯೆಷೂವನಿಗೆ; 12 ಹತ್ತನೆಯದು ಶೆಕನ್ಯನಿಗೆ; ಹನ್ನೊಂದನೆಯದು ಎಲ್ಯಾಷೀಬನಿಗೆ; 13 ಹನ್ನೆರಡನೆಯದು ಯಾಕೀಮನಿಗೆ; ಹದಿಮೂರನೆಯದು ಹುಪ್ಪನಿಗೆ; ಹದಿನಾಲ್ಕನೆಯದು ಎಷೆಬಾಬನಿಗೆ; 14 ಹದಿನೈದನೆಯದು ಬಿಲ್ಗನಿಗೆ; 15 ಹದಿನಾರನೆಯದು ಇಮ್ಮೇರನಿಗೆ; ಹದಿನೇಳನೆಯದು ಹೇಜೀರನಿಗೆ; 16 ಹದಿನೆಂಟನೆಯದು ಹಪ್ಪಿಚ್ಚೇಚನಿಗೆ; ಹತ್ತೊಂಭತ್ತನೆಯದು ಪೆತಹ್ಯನಿಗೆ; ಇಪ್ಪತ್ತನೆಯದು ಯೆಹೆಜ್ಕೇಲನಿಗೆ; 17 ಇಪ್ಪತ್ತೊಂದನೆಯದು ಯಾಕೀನನಿಗೆ; 18 ಇಪ್ಪತ್ತೆರಡನೆಯದು ಗಾಮೂಲನಿಗೆ; ಇಪ್ಪತ್ತ ಮೂರನೆಯದು ದೆಲಾಯನಿಗೆ; 19 ಇಪ್ಪತ್ತನಾಲ್ಕನೆಯದು ಮಾಜ್ಯನಿಗೆ. ಆರೋನ್ಯರು ಈ ವರ್ಗಕ್ರಮದಿಂದ ಯೆಹೋವನ ಆಲಯಕ್ಕೆ ಬಂದು, ಇಸ್ರಾಯೇಲ್ ದೇವರಾದ ಯೆಹೋವನು ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನಿಯವಿುಸಿದ ಸೇವೆಯನ್ನು ನಡಿಸತಕ್ಕದ್ದು. 20 ಉಳಿದ ಲೇವಿಯರ [ಪಟ್ಟಿ]. ಅಮ್ರಾಮನ ಸಂತಾನದವನಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನೂ 21 ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ 22 ಇಚ್ಹಾರನ ಸಂತಾನದವನಾದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು. 23 [ಹೆಬ್ರೋನನ] ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮನು ನಾಲ್ಕನೆಯವನು. 24 ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ 25 ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನೂ ಪ್ರಧಾನರು. 26 ಮೆರಾರೀಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವರು. 27 ಮೆರಾರೀಯ ಸಂತಾನದವರಲ್ಲಿ ಯಾಜ್ಯನಿಂದ ಹುಟ್ಟಿದವರು - ಬೆನೋ, ಶೋಹಮ್, ಜಕ್ಕೂರ್, ಇಬ್ರೀ ಇವರೇ. 28 ಮಹ್ಲೀಯಿಂದ ಹುಟ್ಟಿದವರು - ಮಕ್ಕಳಿಲ್ಲದೆ ಸತ್ತ ಎಲ್ಲಾಜಾರನೂ ಕೀಷನೂ. 29 ಕೀಷನಿಂದ ಯೆರಹ್ಮೇಲನು ಹುಟ್ಟಿದನು. 30 ಮೂಷೀಯ ಮಕ್ಕಳು - ಮಹ್ಲೀ, ಏದೆರ್, ಯೆರೀಮೋತ್ ಎಂಬವರು. 31 ಇವರೆಲ್ಲಾ ಲೇವಿಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆಯೂ ಯಾಜಕರ ಮತ್ತು ಲೇವಿಯರ ಕುಟುಂಬಪ್ರಧಾನರ ಮುಂದೆಯೂ ಚೀಟಿನಿಂದ ತಮ್ಮಲ್ಲಿ ಸರತಿಗಳನ್ನು ನೇವಿುಸಿಕೊಂಡರು. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India